ಗುರುವಾರ, ಮಾರ್ಚ್ 20, 2014

ಚುಚ್ಚಾಣಿ

ಚುಚ್ಚಾಣಿ ಚೂಪಿನದಣ್ಣಾ
ಸಿಕ್ಕಸಿಕ್ಕಲಿ ಚುಚ್ಚಿ ನೋಯಿಸುವುದಣ್ಣಾ
ಚುಚ್ಚಾಣಿ ಚೂಪಿನದಣ್ಣಾ|| ||ಪ||

ಚಿನ್ನದ ಚುಚ್ಚಾಣಿ ನವರಸದ ಚುಚ್ಚಾಣಿ
ಎಲ್ಲರ ಮೆಚ್ಚಿನ ಕಟ್ಟಾಣಿಯಣ್ಣಾ ||ಚುಚ್ಚಾಣಿ||

ಆಸೆ ಪುಗ್ಗೆಯೇರಿ ಸಂಭ್ರಮದಿ ತೇಲಿದ್ದೆ
ಪುಗ್ಗೆ ಡಬ್ಬೆಂದು ಧೊಪ್ಪನೆ ಕೆಳಬಿದ್ದೆ|| ||ಚುಚ್ಚಾಣಿ||

ಬಂಧು ಬಳಗದೆ ಕೂಡಿ ನಲಿಯುತಲಿದ್ದೆ
ಚುಚ್ಚು ಮಾತಿಂದಾಗಿ ಒಂಟಿ ಹೊರಬಿದ್ದೆ||||ಚುಚ್ಚಾಣಿ||

ದೇವಾಂತಃಕರಣದ ಫಲ ಕೈಲಿ ಹಿಡಿದಿದ್ದೆ
ಚುಚ್ಚು ಕಾಲ್ತೊಡರಿ ಎಡವಿ ಬಿದ್ದಿದ್ದೆ|| ||ಚುಚ್ಚಾಣಿ||

ಚುಚ್ಚಾಣಿ ಚೂಪಿನದಣ್ಣಾ
ಸಿಕ್ಕಸಿಕ್ಕಲಿ ಚುಚ್ಚಿ ನೋಯಿಸುವುದಣ್ಣಾ
ಚುಚ್ಚಾಣಿ ಚೂಪಿನದಣ್ಣಾ||

(ಸ್ಪೂರ್ತಿ: ಪುರಂದರದಾಸರ 'ದುಗ್ಗಾಣಿ ಬಲು ಕೆಟ್ಟದಣ್ಣಾ"..)

1 ಕಾಮೆಂಟ್‌:

  1. ಅಶ್ವಿನಿ
    ಅಂತ ರಾಮನಿಗೆ ಬಿಡಲಿಲ್ಲ ಚುಚ್ಚು ಮಾತುಗಳು. ಇನ್ನು ನಮ್ಹಂತವರಿಗೆ ಬಿಡುತ್ತಾ ಚುಚ್ಚಾಣಿ...
    ಚೆನ್ನಾಗಿದೆರೀ ನಿಮ್ಮ ಕವನ.
    -ಅಶ್ವಿನಿ

    Sujatha Lokesh
    ಚುಚ್ಚಾಣಿ ಚೆನ್ನಾಗಿದೆ.

    Kavi Nagaraj
    ಧನ್ಯವಾದ, ಸುಜಾತಾ ಲೋಕೇಶರೇ.

    ಪ್ರತ್ಯುತ್ತರಅಳಿಸಿ