ಆಹಾ, ನಾವ್ ಆಳುವವರು
ಓಹೋ ನಾವ್ ಅಳಿಸುವವರು ||ಪ||
ಕುರ್ಚಿಯ ಕಾಲ್ಗಳನೊತ್ತುವೆವು
ತಡೆದರೆ ಕೈಯನೆ ಕಡಿಯುವೆವು|
ದೇಶವ ಪೊರೆಯುವ ಹಿರಿಗಣರು
ಖಜಾನೆ ಕೊರೆಯುವ ಹೆಗ್ಗಣರು|
ಜಾತ್ಯಾತೀತರು ಎನ್ನುವೆವು
ಜಾತೀಯತೆಯ ಬೆಳೆಸುವೆವು|
ಗಾಂಧಿಯ ನಾಮ ಜಪಿಸುವೆವು
ಬ್ರಾಂದಿಯ ಕುಡಿದು ಮಲಗುವೆವು|
ಬಿದ್ದರೆ ಪಾದವ ಹಿಡಿಯುವೆವು
ಎದ್ದರೆ ಎದೆಗೆ ಒದೆಯುವೆವು|
ಪಾದಯಾತ್ರೆಯನು ಮಾಡುವೆವು
ಕುರ್ಚಿಯ ಕನಸನು ಕಾಣುವೆವು|
ಗೆದ್ದವರನೆ ನಾವ್ ಕೊಳ್ಳುವೆವು
ಸ್ವಂತದ ಸೇವೆಯ ಮಾಡುವೆವು|
ಸಮಾಜ ಸೇವಕರೆನ್ನುವೆವು
ದೇಶವ ಹರಿದು ತಿನ್ನುವೆವು|
*********
-ಕವಿನಾಗರಾಜ್.
ಓಹೋ ನಾವ್ ಅಳಿಸುವವರು ||ಪ||
ಕುರ್ಚಿಯ ಕಾಲ್ಗಳನೊತ್ತುವೆವು
ತಡೆದರೆ ಕೈಯನೆ ಕಡಿಯುವೆವು|
ದೇಶವ ಪೊರೆಯುವ ಹಿರಿಗಣರು
ಖಜಾನೆ ಕೊರೆಯುವ ಹೆಗ್ಗಣರು|
ಜಾತ್ಯಾತೀತರು ಎನ್ನುವೆವು
ಜಾತೀಯತೆಯ ಬೆಳೆಸುವೆವು|
ಗಾಂಧಿಯ ನಾಮ ಜಪಿಸುವೆವು
ಬ್ರಾಂದಿಯ ಕುಡಿದು ಮಲಗುವೆವು|
ಬಿದ್ದರೆ ಪಾದವ ಹಿಡಿಯುವೆವು
ಎದ್ದರೆ ಎದೆಗೆ ಒದೆಯುವೆವು|
ಪಾದಯಾತ್ರೆಯನು ಮಾಡುವೆವು
ಕುರ್ಚಿಯ ಕನಸನು ಕಾಣುವೆವು|
ಗೆದ್ದವರನೆ ನಾವ್ ಕೊಳ್ಳುವೆವು
ಸ್ವಂತದ ಸೇವೆಯ ಮಾಡುವೆವು|
ಸಮಾಜ ಸೇವಕರೆನ್ನುವೆವು
ದೇಶವ ಹರಿದು ತಿನ್ನುವೆವು|
*********
-ಕವಿನಾಗರಾಜ್.
ಪೊಳ್ಳು democratic ಛದ್ಮ ವೇಷಧಾರಿಗಳನ್ನು ನಿರ್ವಸ್ತ್ರ ಮಾಡಿಬಿಟ್ಟಿದ್ದೀರ.
ಪ್ರತ್ಯುತ್ತರಅಳಿಸಿ:) ಧನ್ಯವಾದಗಳು, ಬದರೀನಾಥರೇ.
ಅಳಿಸಿ