ಶುಕ್ರವಾರ, ಜೂನ್ 20, 2014

ಅರಿವು


ನಮ್ಮವರೆಂಬರು ನಮ್ಮವರಲ್ಲ; ಮೋಹಕೆ ಸಿಲುಕಿ ಬಳಲಿದೆನಲ್ಲ |
ದೇವ ನಿನ್ನನು ನೆನೆಯಲೆ ಇಲ್ಲ; ಹುಟ್ಟಿನ ಮಹತಿ ತಿಳಿಯಲೆ ಇಲ್ಲ || ಪ ||

ಕಂಡದ್ದೆಲ್ಲ ಬಯಸಿದೆನಲ್ಲ; ಸಿಕ್ಕದೆ ಇರಲು ಶಪಿಸಿದೆನಲ್ಲ |
ಇಲ್ಲದ ಬಯಸಿ ಕೊರಗಿದೆನಲ್ಲ; ಇದ್ದುದ ಬಿಟ್ಟು ಕೆಟ್ಟೆನಲ್ಲ || 1 ||

ಚಪಲತೆ ಕಣ್ಣನು ಮುಚ್ಚಿತಲ್ಲ; ನಿಜ ಕಾಣದಾಯಿತಲ್ಲ |
ಚಂಚಲ ಬುದ್ಧಿ ಆಡಿದ ಆಟಕೆ ಮೋಸ ಹೋದೆನಲ್ಲಾ || 2 ||

ಸಜ್ಜನ ಸಂಗವ ಮಾಡಲಿಲ್ಲ; ಸದ್ಗತಿ ಸಿಗಲಿಲ್ಲ |
ಕೋಪವು ಮತಿಯ ತಿಂದಿತಲ್ಲ; ಮನಸೇ ಸರಿಯಿಲ್ಲ || 3 ||

ಮಿಗಿಲಾರೆಂದು ಬೀಗಿದೆನಲ್ಲ; ನಗೆಪಾಟಲಾಯಿತಲ್ಲ |
ರಜೋ ತಮಗಳ ಆರ್ಭಟದಲ್ಲಿ ಸತ್ವ ಸತ್ತಿತಲ್ಲಾ || 4 ||

ನಾನು ಎಂಬುದು ನಿಜವಲ್ಲ; ನಾನೇ ಎಂಬುದು ತರವಲ್ಲ |
ನಿನ್ನನು ಬಿಟ್ಟು ನಾನೇನೆಂಬುದ ಅರಿಯಲಿಲ್ಲವಲ್ಲಾ || 5 ||

ಕ.ವೆಂ.ನಾಗರಾಜ್.

2 ಕಾಮೆಂಟ್‌ಗಳು:

  1. ಮಹತಿಯ ಕೊರತೆಯಿಂದ ಮನುಜನು ಮಂಕುಗಟ್ಟಬಹುದು.
    ಪ್ರಾಯಶ್ಚಿತ್ತವೇ ಪರಮೌಷದವು ಮನೋನ್ನತಿಗಲ್ಲವೇ ಕವಿವರ್ಯ..

    ಪ್ರತ್ಯುತ್ತರಅಳಿಸಿ
  2. ಧನ್ಯವಾದ ಬದರೀನಾಥರೇ. "ಚಂಚಲ ಬುದ್ಧಿ ಆಡಿದ ಆಟಕೆ ಎಡವಿ ಬಿದ್ದೆನಲ್ಲಾ " ಎಂಬ ಸಾಲು ಅಪಾರ್ಥ ಮೂಡಿಸುವಂತಿದೆಯೆಂದು ಅನ್ನಿಸುತ್ತಿದೆ. ಆದರೂ. . . . . . ಇರಲಿ ಬಿಡಿ.

    ಪ್ರತ್ಯುತ್ತರಅಳಿಸಿ