ಶುಕ್ರವಾರ, ಆಗಸ್ಟ್ 8, 2014

ತಿಳಿದೆ ನಾನು!


ತಿಳಿದೆ ನಾನು
ಒಬ್ಬನೇ ಬಂದೆ ಒಬ್ಬನೇ ಹೋಗುವೆನೆಂದು!
ತಿಳಿದೆ ನಾನು
ಕೆಲರು ಒಡನಿರುವರು ನಾನು ಬೇಕೆಂದಲ್ಲ ,
ಅವರಿಗೆ ನಾನು ಬೇಕಿತ್ತೆಂದು!
ತಿಳಿದೆ ನಾನು 
ಯಾರನ್ನು ಇಷ್ಟಪಡುವೆನೋ ಅವರಿಂದ
ದೂರಲ್ಪಡುವೆನೆಂದು!
ತಿಳಿದೆ ನಾನು
ಪ್ರಿಯರ ಸಣ್ಣ ಸುಳ್ಳು ಹೃದಯ ಒಡೆಸೀತೆಂದು!
ತಿಳಿದೆ ನಾನು
ಆಸರೆಯ ಭುಜವಿಲ್ಲದೆ ಅಳುವುದು ಕಷ್ಟವೆಂದು!
ತಿಳಿದೆ ನಾನು
ಇರುವ ಪ್ರೀತಿಯನ್ನೆಲ್ಲಾ ಕಳೆದುಕೊಳ್ಳದೆ
ಸ್ವಂತಕ್ಕೂ ಸ್ವಲ್ಪ ಉಳಿಸಿಕೊಳ್ಳಬೇಕೆಂದು!
ತಿಳಿದೆ ನಾನು
ಎಲ್ಲರೊಡನಿದ್ದರೂ ಒಂಟಿಯಾಗಿರುವೆನೆಂದು!
ತಿಳಿದೆ ನಾನು
ಬದಲಾಗಬೇಕಾದ್ದು ನಾನೇ ಎಂದು!
ತಿಳಿದೆ ನಾನು
ಬಯಸಿದಂತೆ ನಡೆಯುವುದು ಕಷ್ಟವೆಂದು!
ತಿಳಿದೆ ನಾನು
ಬಹಿರಂಗ ಅಂತರಂಗವ ನುಂಗಿ ನೀಗೀತೆಂದು!
ತಿಳಿದೆ ನಾನು
ಏಕಾಂತ ಮಾತ್ರ ನನ್ನತನವನುಳಿಸೀತೆಂದು!
ತಿಳಿದೆ ನಾನು
ತಿಳಿದದ್ದು ಸ್ವಲ್ಪ ತಿಳಿಯದಿರುವುದು ಬಹಳವೆಂದು!
ತಿಳಿದೆ ನಾನು
. . . . . . . . . . . . . . . . . . . . . . . . . . . . . .! 

-ಕ.ವೆಂ.ನಾಗರಾಜ್.

3 ಕಾಮೆಂಟ್‌ಗಳು:

 1. ’ತಿಳಿದೆ ನಾನು
  ತಿಳಿದದ್ದು ಸ್ವಲ್ಪ ತಿಳಿಯದಿರುವುದು ಬಹಳವೆಂದು!’
  ನನಗಂತೂ ಇದು ಅನ್ವಯ ಶತ ಪ್ರತಿಶತಃ

  ಪ್ರತ್ಯುತ್ತರಅಳಿಸಿ
  ಪ್ರತ್ಯುತ್ತರಗಳು
  1. ಬದರೀನಾಥರೇ,
   ವಂದನೆಗಳು. ನಿಮ್ಮಿಂದ ನಾನು ಬಹಳಷ್ಟು ತಿಳಿದುಕೊಂಡಿರುವೆ.
   -ನಾಗರಾಜ್.

   ಅಳಿಸಿ
 2. Nagraj Nadig
  ಇದು ಕಟು ಸತ್ಯ, ಎಲ್ಲರೂ ಇದನ್ನು ಅರಿತರೆ ರಾಗ ದ್ವೇಷ ಭಾವ ಇರುವುದಿಲ್ಲ ಆಗ ಎಲ್ಲವೂ ನಶ್ವರ

  ಪ್ರತ್ಯುತ್ತರಅಳಿಸಿ